SSLC / PUC ಮಕ್ಕಳಿಗೆ ಉಚಿತ ಬಸ್ ಪ್ರಯಾಣ

Written by - Harsha R Patil

2024-25ನೇ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 01ಮಾಚ್೯ 2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ( PUC ) ವಿದ್ಯಾರ್ಥಿಗಳಿಗೆ ಮತ್ತು ದಿನಾಂಕ 21.03.2025 ರಿಂದ ಎಸ್‌ಎಸ್‌ಎಲ್‌ಸಿ ( SSLC ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಸಾರಿಗೆ ನಿಗಮವು ಉಚಿತ ಬಸ್ ಸೇವೆ ಘೋಷಣೆ ಮಾಡಲಾಗಿದೆ . SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅನುಕೂಲ ವಾಗಲಿದೆ. ಮಾನ್ಯ ಕರ್ನಾಟಕ ಸರ್ಕಾರ ಈ ಯೋಜನೆ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.



ಪರೀಕ್ಷೆಗಳ ಸಂದರ್ಭದಲ್ಲಿ ಕನಾ೯ಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸರ್ಕಾರಿ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್ ( Admit Card ) ತೋರಿಸಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತು ಸಾರಿಗೆ ನಿಗಮಗಳಿಗೆ ಮಾಹಿತಿ ನೀಡಲಾಗಿದ್ದು, ಸುತ್ತೋಲೆಯ ಪ್ರಕಾರ ಚಾಲಕರು, ನಿರ್ವಾಹಕರಿಗೂ ಸೂಕ್ತ ನಿರ್ದೇಶನ ನೀಡುವಂತೆ ಸೂಚನೆ ನೀಡಲಾಗಿದೆ.


ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಚಾಲನಾ ಸಿಬ್ಬಂದಿಗಳು ಈ ನಿಯಮವನ್ನು ತಪ್ಪದೇ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಬೆಂಗಳೂರು ಕರಾರಸಾ ನಿಗಮ ಮುಖ್ಯ ಸಂಚಾರ ವ್ಯವಸ್ಥಾಪಕರು(ವಾ) ಉಲ್ಲೇಖ-1 ರನ್ವಯ ಸುತ್ತೋಲೆ ಹೊರಡಿಸಿದ್ದಾರೆ. 



Comments

Popular posts from this blog

Kolkata Doctor Brutal Rape and murder case

Remembering legendary freedom fighter Mangal Pandey on his birth anniversary, July 19 🇮🇳🇮🇳🇮🇳